ಬ್ರಹ್ಮಾವರ, ಮೇ. 15(DaijiworldNews/AK): ಕೇರಳದಿಂದ ಪ್ರವಾಸಕ್ಕೆ ಹೊರಟ್ಟಿದ್ದ ಟಿ.ಟಿ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ಹೈಸ್ಕೂಲು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.



ಸುಮಾರು ಹತ್ತು ಜನ ಪ್ರಯಾಣಿಕರಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನ ಅನಾರೋಗ್ಯಕ್ಕೆ ಒಳಗಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕೋಟ ಎಸ್ ಐ ಸುಧಾ ಪ್ರಭು ಸಿಬ್ಬಂದಿ ಜೊತೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.