ಕಣ್ಣೂರು, ಜೂ 20 (Daijiworld News/SM): ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 75 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂರು ಪ್ರಕರಣದಲ್ಲಿ ಒಂದೇ ದಿನ 75 ಲಕ್ಷ ಬೆಲೆ ಬಾಳುವ ಚಿನ್ನದ ಪೇಸ್ಟ್ ಹಾಗೂ ಸರವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿದೇಶದಿಂದ ಆಗಮಿಸುವ ವೇಳೆ 2 ಕಿಲೋ ಗ್ರಾಂ ಚಿನ್ನದ ಪೇಸ್ಟ್ ಹಾಗೂ 583 ಗ್ರಾಂ ಚಿನ್ನದ ಸರವನ್ನು ತಮ್ಮ ಒಳ ವಸ್ತ್ರಗಳ ಮೂಲಕ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಸೈನುದ್ದೀನ್ ರಮೀಸ್ ಎಂದು ಗುರುತಿಸಲಾಗಿದೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಿಚಾರಣೆ ಮುಂದುವರೆದಿದೆ.