ಮಂಗಳೂರು, ಜೂ 20 (Daijiworld News/MSP): ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಜೂ.21 ರಂದು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮಂಗಳೂರಿನ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಬೇರೆ ಬೇರೆ ಕಡೆಗಳಲ್ಲಿ ಆಚರಣೆಆಯೋಜಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲಾ ಆಯುಷ್ ಇಲಾಖೆ ಮತ್ತು ನೆಹರೂ ಯುವ ಕೇಂದ್ರದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ಜರಗಿತು. ಕಾರ್ಯಕ್ರಮದಲ್ಲಿ ಶಾಸಕ ಡಿ ವೇದವ್ಯಾಸ್ ಕಾಮತ್, ಶಾಸಕ ಭರತ್ ಶೆಟ್ಟಿ ಭಾಗವಹಿಸಿದ್ದರು.
ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಸಾಮೂಹಿಕ ಯೋಗ ಪ್ರದರ್ಶನದ ವೇಳೆ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್, ಹಾಗೂ ಶಾಸಕ ಭರತ್ ಶೆಟ್ಟಿ ಯೋಗಭ್ಯಾಸ ಮಾಡಿ ಗಮನ ಸೆಳೆದರು.