ಬೆಳ್ತಂಗಡಿ, ಜೂ. 16 (DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಇಂದಿನಿಂದ (ಜೂನ್ 16) ಪ್ರವೇಶ ನಿಷೇಧಿಸಲಾಗಿದೆ.

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.