ಉಡುಪಿ, ಜೂ. 16 (DaijiworldNews/AA): ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜೂನ್ 17ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ. ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ.
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧಪಟ್ಟವರಿಗೆ ಸೂಚನೆಯನ್ನು ನೀಡಲಾಗಿದೆ.
1.ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
2.ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
3.ಕಠಿಣವಾದ ದಾರಿ ಅಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
4.ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
5.ಈಗ ಮಳೆಗಾಗಿ, ಮಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಲಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
6.ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
7.ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
8.ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿ: 0820-2574802
ಉಡುಪಿ ತಾಲೂಕು ಕಚೇರಿ: 0820-2520417
ಕಾರ್ಕಳ ತಾಲೂಕು ಕಚೇರಿ: 08258-230201
ಕುಂದಾಪುರ ತಾಲೂಕು ಕಚೇರಿ: 08254-230357
ಬ್ರಹ್ಮಾವರ: 0820-2560494
ಬೈಂದೂರು: 08254-251657
ಕಾಪು: 0820-2551444
ಹೆಬ್ರಿ: 08253-250201
ಉಡುಪಿ ನಗರ ಪುರಸಭೆ: 0820-2520306