ಸುಳ್ಯ, ಜೂ. 17 (DaijiworldNews/AA): ಚಾಲಕನ ನಿಯಂತ್ರಣ ತಪ್ಪಿ ಡಸ್ಟರ್ ಕಾರೊಂದು ರಸ್ತೆ ಬದಿ ಪಲ್ಟಿಯಾದ ಘಟನೆ ಅಡ್ಕಾರು ಬೈತಡ್ಕ ತಿರುವು ನಲ್ಲಿ ನಡೆದಿದೆ.



ಸುಳ್ಯ ಕಡೆಯಿಂದ ಪುತ್ತೂರಿ ನತ್ತ ಹೋಗುತ್ತಿದ್ದ ಕಾರು ಪಲ್ಟಿಯಾಗಿದೆ. ಕಾರು ಸಂಪೂರ್ಣವಾಗಿ ತಲೆಕೆಳಗಾಗಿ ರಸ್ತೆಯಲ್ಲಿ ಬಿದ್ದಿದ್ದು ಘಟನೆಯಿಂದ ಕಾರು ನಜ್ಜುಗುಜ್ಜಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.