ಮಂಗಳೂರು, ಜೂ22(Daijiworld News/SS): ನಗರದ ಹೊರವಲಯದಲ್ಲಿ ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಕೊಡಿಂಬಾಡಿ ನಿವಾಸಿ ಗಣೇಶ್ ರೈ (43) ಹಾಗೂ ಬೊಂದೆಲ್ ಕೆಎಚ್ಬಿ ಕಾಲನಿ ನಿವಾಸಿ ಸಂತೋಷ್ (28) ಬಂಧಿತ ಆರೋಪಿಗಳು.
ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿಸಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಕಾವೂರು ಇನ್ಸ್ಪೆಕ್ಟರ್ ಕೆ.ಆರ್.ನಾಯಕ್ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 20 ಸಾವಿರ ರೂ. ನಗದು, ಮೊಬೈಲ್ ಸೇರಿದಂತೆ ಒಟ್ಟು 40 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಹರೀಶ್ ಶೆಟ್ಟಿ ಹಾಗೂ ಪ್ರಮೋದ್ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.