ಸುಳ್ಯ, ಜೂ. 18 (DaijiworldNews/TA): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸುಳ್ಯದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದರು.

ಸುಳ್ಯ ತಾ.ಪಂ. ರಾಜ್ಯ ಇಂಜಿನಿಯರಿಂಗ್ ಉಪ ವಿಭಾಗದಲ್ಲಿ ಸಚಿವರು ನೂತನ ಕಚೇರಿ ಕಟ್ಟಡ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದರು. ಅಲ್ಲಿಂದ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಹಾಗೂ ಕಚೇರಿ ಉದ್ಘಾಟಿಸಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಹಶೀಲ್ದಾರ್ ಮಂಜುಳಾ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.