ಉಡುಪಿ, ಜೂ. 18 (DaijiworldNews/TA): ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಸ್ವರೂಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ರಾಜ್ಯ ಸರಕಾರ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ವರ್ಗಾವಣೆಗೊಳಿಸಿ 2012 ನೇ ಬ್ಯಾಚಿನ ಐಎಎಸ್ ಅಧಿಕಾರಿ ಸ್ವರೂಪ ಟಿ ಕೆ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿತ್ತು. ಅಧಿಕಾರ ಸ್ವೀಕಾರ ಕಾರ್ಯಕ್ರಮ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎಎಸ್ಪಿ ಕಾರ್ಕಳ ಹರ್ಷಂ ಪ್ರಿಯಂ ವಧಾ, ಕುಂದಾಪುರ ಸಹಾಯಕ ಕಮೀಷನರ್ ರಶ್ಮೀ ಹಾಗೂ ಇತರರು ಉಪಸ್ಥೀತರಿದ್ದರು. ಇನ್ನು 2023ರ ಜುಲೈ 14ರಿಂದ ಉಡುಪಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ.