ಸುಳ್ಯ, ಜೂ. 21 (DaijiworldNews/AK):11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಪ್ರೆಸ್ ಕ್ಲಬ್ ಸುಳ್ಯ, ಜರ್ನಲಿಸ್ಟ್ ಯೂನಿಯನ್ ಸುಳ್ಯ, ಕಾರ್ಯನಿರತ ಪತ್ರಕರ್ತರ ಸಂಘ ಸುಳ್ಯ, ಪಯಸ್ವಿನಿ ಯುವಕ ಮಂಡಲ ಕೇರ್ಪಳ ಇದರ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಹಿರಿಯ ಪತ್ರಕರ್ತ ಗಂಗಾಧರ್ ಮಟ್ಟಿ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸಿ.ಒ ರಾಜಣ್ಣ, ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ, ಯೋಗ ಗುರು ಶ್ರೀಮತಿ ಸುನಂದ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿದ್ದರು.