ಸುಳ್ಯ, ಜೂ. 23 (DaijiworldNews/TA): ಕನಕ ಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತೋಡಿಗೆ ಬುಡಮೇಲಾಗಿ ಉರುಳಿ ಬಿದ್ದ ಘಟನೆ ನಡೆದಿದೆ.

ಮೈಸೂರು ಮೂಲದ ನಿವಾಸಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.