ಬಂಟ್ವಾಳ, ಜು. 01 (DaijiworldNews/AA): ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜೂನ್ 30ರಂದು ಬಂಧಿಸಲಾಗಿದೆ.

ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ.
2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಆರೋಪಿ ಅಕ್ಬರ್ ಸಿದ್ದಿಕ್ ತಲೆಮರೆಸಿಕೊಂಡಿದ್ದ. ಆರೋಪಿಯನ್
ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂನ್ 30ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಲಾಯಿತು. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
೨೦೧೧ನೇ ಸಾಲಿನಲ್ಲಿ ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ: 35/2011, ಕಲಂ 143, 147, 148, 447, 448, 504, 323, 324, 326, 354, 506, 307, 427, R/w 149 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.