ಉಡುಪಿ, ,ಜು. 02 (DaijiworldNews/AK):ಮಣಿಪಾಲದ ಎಂಐಟಿ ಕಾಲೇಜು ಬಳಿ ಸಂಭವಿಸಿದ ಭೀಕರ ಘಟನೆಯಲ್ಲಿ, ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ 65 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.



ಮೃತರನ್ನು ವಿನೋದಾ (65) ಎಂದು ಗುರುತಿಸಲಾಗಿದೆ. ತನ್ನ ಮೊಮ್ಮಕ್ಕಳನ್ನು ಮನೆಗೆ ಬಿಟ್ಟು ರಸ್ತೆ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಉಡುಪಿಯಿಂದ ಧರ್ಮಸ್ಥಳದ ಯಾತ್ರಾ ಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದ ಬಸ್, ಡಿಕ್ಕಿ ಹೊಡೆದಾಗ ವೇಗವಾಗಿ ಚಲಿಸುತ್ತಿತ್ತು ಎಂದು ತಿಳಿದುಬಂದಿದೆ. ಇದರ ಪರಿಣಾಮ ಮಹಿಳೆ ಬಸ್ಸಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದು ಬಂದಿದೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.