ಉಡುಪಿ,ಜು. 23 (DaijiworldNews/AK): ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿರುವ ಹಿನ್ನೆಲೆಯಲ್ಲಿ, ಜುಲೈ 24 ರ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮುನ್ನೆಚ್ಚರಿಕೆ ಕ್ರಮವನ್ನು ಪ್ರಕಟಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.