ಮಂಗಳೂರು, ಜು. 24 (DaijiworldNews/AA): ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜುಲೈ 24 ರಂದು ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಬುಧವಾರ ಇಡೀ ದಿನ, ರಾತ್ರಿ ಮತ್ತು ಗುರುವಾರ ಮುಂಜಾನೆ ತೀವ್ರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಕ್ಕಳು ತಗ್ಗು ಪ್ರದೇಶಗಳು, ಕೆರೆಗಳು, ಸಮುದ್ರ ತೀರ ಮತ್ತು ನದಿ ದಡಗಳಿಗೆ ಹೋಗದಂತೆ ನೋಡಿಕೊಳ್ಳಲು ಪೋಷಕರಿಗೆ ಸೂಚಿಸಲಾಗಿದೆ. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಸ್ಥಾನದಲ್ಲಿ ಇರುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಲು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ.