ಸುಳ್ಯ, ಆ. 06 (DaijiworldNews/TA): ಈ ಬಾರಿ ಸ್ವಾತಂತ್ರ್ಯ ದಿನವನ್ನು ಆಚರಿಸುವ ಕುರಿತು ತಹಶೀಲ್ದಾರ್ ಮಂಜುಳಾ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ತಾಲೂಕು ಪಂಚಾಯತ್ ಕಚೇರಿಯಲ್ಲಿ ನಡೆಯಿತು.

ತಹಶೀಲ್ದಾರ್ ಮಾತನಾಡಿ, ಕಾರ್ಯಕ್ರಮ ಆಯೋಜನೆಗೆ ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬಂದಿ ಸಮನ್ವಯ ಸಾಧಿಸಿಕೊಂಡು ತಂಡವಾಗಿ ಕೆಲಸ ಮಾಡಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು. ನೀಡಿರುವ ಜವಾಬ್ದಾರಿಗಳನ್ನು ನಿರ್ವಹಿಸಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜನೆಗೆ ಬೇಕಾದ ಎಲ್ಲ ರೀತಿಯ ತಯಾರಿಗಳನ್ನು ನಿರ್ವಹಿಸಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತಹಶೀಲ್ದಾರ್ ಜವಾಬ್ದಾರಿ ಹಂಚಿಕೆ ಮಾಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಧಿಕಾರಿ ರಾಜಣ್ಣ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.