ಮಂಗಳೂರು, ಆ. 07 (DaijiworldNews/TA): ಬಲ್ಮಠದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ್ದ ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಮೊಡಂಕಾಪು ನಿವಾಸಿ ಮೆಲ್ರಾಯ್ ಶಾನ್ ಡಿಸೋಜಾ (24) ಎಂದು ಗುರುತಿಸಲಾಗಿದೆ.

ಅವರು ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಜಿಎನ್ಎಂ ಮೂರನೇ ವರ್ಷ ವ್ಯಾಸಂಗ ಮಾಡುತ್ತಿದ್ದರು ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ ಆಗಿಯೂ ಕೆಲಸ ಮಾಡುತ್ತಿದ್ದರು. ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.