ಮಂಗಳೂರು, ಆ. 08 (DaijiworldNews/AA): ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಳ ಜ್ಯೋತಿ ಜಂಕ್ಷನ್ ಬಳಿ ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬದ್ರುದ್ದೀನ್(35) ಎಂದು ಗುರುತಿಸಲಾಗಿದೆ.
ಆರೋಪಿಯಿಂದ 2 ಕೆ.ಜಿ. ಗಾಂಜಾ, 20,000 ರೂ. ನಗದು, ಒಂದು ಮೊಬೈಲ್ ಫೋನ್ ಮತ್ತು ಆಟೋರಿಕ್ಷಾ ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಗವಿರಾಜು ಆರ್.ಪಿ., ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಡಿ., ಹೆಡ್ ಕಾನ್ಸ್ಟೆಬಲ್ಗಳಾದ ಕಮಲಾಕ್ಷ, ಶಶಿಧರ್ ಮತ್ತು ಶಂಕ್ರಪ್ಪ, ಹಾಗೂ ಕಾನ್ಸ್ಟೆಬಲ್ಗಳಾದ ಸಿಕಂದರ್, ಬಿರೇಂದ್ರ ಮತ್ತು ಪ್ರದೀಪ್ ತಂಡವು ಈ ಕಾರ್ಯಾಚರಣೆ ನಡೆಸಿದೆ.