ಕಾಸರಗೋಡು, ಆ. 09 (DaijiworldNews/TA): ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಂಗಳೂರು ಮೂಲದ ಜಯಶೀಲ ಪುಟ್ಟಣ್ಣ ಶೆಟ್ಟಿ(52) ಎಂಬಾತನನ್ನು ಬಂಧಿಸಲಾಗಿದೆ. ವಾಹನ ತಪಾಸಣೆ ಮಾಡುತ್ತಿದ್ದ ಅಬಕಾರಿ ಸಿಬ್ಬಂದಿಗಳು ಈತನ ಬ್ಯಾಗನ್ನು ಪರಿಶೀಲಿಸಿದಾಗ ನಗದು ಪತ್ತೆಯಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಹಣ ಸಾಗಾಟ ನಡೆದಿತ್ತು. ಈ ಸಂಬಂಧ ವಿಚಾರಣೆ ನಡೆಯುತ್ತಿದ್ದು, ಈ ಹಣ ಯಾರಿಂದ ಎಲ್ಲಿಗೆ ಸಾಗಾಟವಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.