ಬೆಳ್ತಂಗಡಿ, ಆ. 10(DaijiworldNews/TA): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ 4 ಮಂದಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಆರು ಮಂದಿಯನ್ನು ಬಂಧಿಸಲಾಗಿತ್ತು.
.jpg)
ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆಗಸ್ಟ್ 9ರಂದು ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂಬವರನ್ನು ಬಂಧಿಸಿದ್ದು ಶನಿವಾರ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು, 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ಆ.11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ನ್ಯಾಯಾಧೀಶರು ಆದೇಶಿಸಿದ್ದಾರೆ. ಎರಡು ಗುಂಪುಗಳು ಅಕ್ರಮ ಕೂಟ ಸೇರಿ ಗಲಾಟೆ ಮಾಡಿದ್ದು ಪ್ರಕರಣ ಸಂಬಂಧ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ ಅಡಿಯಲ್ಲಿ ಆ.6ರಂದು ರಾತ್ರಿ 27 ಮಂದಿ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.