ಕಾಪು, ಆ. 10 (DaijiworldNews/AA): ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಉಚ್ಚಿಲದಲ್ಲಿ ನಡೆದಿದೆ.

ಮೃತ ಪಾದಚಾರಿಯನ್ನು ಶಂಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ನತಾಷಾ ಮತ್ತು ದರ್ಶನ್ ರಾಜ್ ಎಂದು ಗುರುತಿಸಲಾಗಿದೆ.
ಉಚ್ಚಿಲ ಮತ್ತು ಮೂಳೂರು ಎಸ್ಡಿಪಿಐ ಆಂಬ್ಯುಲೆನ್ಸ್ ಸಹಾಯದಿಂದ ಜಲಾಲುದ್ದೀನ್ ಜಲ್ಲು, ಕೆ ಎಂ ಸಿರಾಜ್, ಹಮೀದ್ ಆಂಬ್ಯುಲೆನ್ಸ್, ಹನೀಫ್ ಮೂಳೂರು, ಆಸಿಫ್ ಮೂಳೂರು ಮತ್ತು ಕಲಂದರ್ ಮೂಳೂರು ಸೇರೆ ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.