ಮಂಗಳೂರು, ಆ. 10 (DaijiworldNews/AA): ಈಜುಕೊಳದಲ್ಲಿ ಮುಳುಗಿ ಕೋಚ್, ಲೈಫ್ಗಾರ್ಡ್ ಸಾವನ್ನಪ್ಪಿದ ಘಟನೆ ಮಂಗಳೂರಿನ ಲೇಡಿಹಿಲ್ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಭಾನುವಾರ ಸಂಭವಿಸಿದೆ.

ಮೃತರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೆ. ಚಂದ್ರಶೇಖರ್ ರೈ ಅವರು 2023 ರಲ್ಲಿ ಈಜುಕೊಳದ ನೀರಿನೊಳಗೆ ಒಂದು ನಿಮಿಷದಲ್ಲಿ 28 ಬಾರಿ ಸಮ್ಮರ್ಸಾಲ್ಟ್ ಎಂಬ ಸ್ಟಂಟ್ ಮಾಡಿ 'ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್'ನಲ್ಲಿ ಸ್ಥಾನ ಗಳಿಸಿದ್ದರು.
ಇನ್ನು ಈ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.