ಬೆಳ್ತಂಗಡಿ,ಆ. 12 (DaijiworldNews/AK): ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಜಿಪಿಆರ್ ಕಾರ್ಯಾಚರಣೆ ಆರಂಭವಾಗಿದೆ. 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ಮುಂದೂಡಲ್ಪಟ್ಟಿತ್ತು. ಇದೀಗ ಮಂಗಳವಾರ ಮಧ್ಯಾಹ್ನದ ವೇಳೆ ಇಲ್ಲಿ ಅಧಿಕೃತವಾಗಿ ಪರಿಶೀಲನಾ ಕಾರ್ಯ ಆರಂಭಿಸಿದ್ದಾರೆ.

ನೇತ್ರಾವತಿ-ಅಜೆಕುರಿ ರಸ್ತೆಯಲ್ಲಿ ನೇತ್ರಾವತಿ ನದಿ ಪಕ್ಕದ ಕಿಂಡಿ ಅಣೆಕಟ್ಟಿನ ಸಮೀಪದ 13ನೇ ಸ್ಥಳದಲ್ಲಿ ಸೋಮವಾರ ಮಧ್ಯಾಹ್ನ 3 ರಿಂದ 3:30ರ ವರೆಗೆ ಪ್ರಾಯೋಗಿಕ ಕಾರ್ಯಾಚರಣೆ ನಡೆದಿತ್ತು.
ಇಂದು ಎಸ್.ಐ.ಟಿ ತಂಡದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಯಂತ್ರಗಳು ಸಜ್ಜಾಗಿದ್ದು, ಕಾರ್ಯಾಚರಣೆ ನಡೆಯಲಿರುವ ನೇತ್ರಾವತಿ ಅಜಿಕುರಿ ರಸ್ತೆಯನ್ನು ಸಂಪೂರ್ಣ ಮುಚ್ಚಲಾಗಿದೆ. ರಸ್ತೆಯ ಎರಡೂ ಬದಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿಯೂ ಹೆಚ್ಚಿನ ಪೊಲೀಸರ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.