ಮಂಗಳೂರು,ಆ. 13 (DaijiworldNews/AK): ಪ್ರಪ್ರಥಮ ಬಾರಿಗೆ ಇಸ್ಕಾನ್ ಮಂಗಳೂರು ವತಿಯಿಂದ ಆ.15ರಂದು ಕೊಡಿಯಾಲ್ ಬೈಲ್ ಕಲಾಕುಂಜದ ಶ್ರೀ ಕೃಷ್ಣ ಬಲರಾಮ ಮಂದಿರ ಮಂಗಳೂರಿನಲ್ಲಿ ಅದ್ದೂರಿಯಾದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಮಾಡುತ್ತಿದೆ ಎಂದು ಅಧ್ಯಕ್ಷ ಗುಣಕರ ರಾಮದಾಸ್ ರವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧ್ಯಾಯ 1 - ಭಗವಾನ್ ಶ್ರೀಕೃಷ್ಣನ ದೈವಸ್ವರೂಪ ಅವತಾರಕ್ಕೆ ಸಮರ್ಪಿತ ಎರಡು ದಿನಗಳ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಸಮ್ಮಿಲಿತವಾದ ಹಬ್ಬ.
ಭಕ್ತಿ, ಸಂಸ್ಕೃತಿ ಮತ್ತು ಕ್ರಿಯಾತ್ಮತೆಯ ಮೂಲಕ ಮಂಗಳೂರ ಜನತೆಯನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ನಗರದಲ್ಲಿ ಶ್ರೀಕೃಷ್ಣ ಪ್ರಜ್ಞೆಯನ್ನು ಪಸರಿಸುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ವಿನೋದಾವಳಿಗಳು, ಸ್ಪರ್ಧೆಗಳು, ಡಿಜಿಟಲ್ ಪ್ರಚಾರ, ಪವಿತ್ರ ಆಚರಣೆಗಳು ಹಾಗೂ ಇನ್ನಿತರ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.