ಬಂಟ್ವಾಳ, ಆ. 17 (DaijiworldNews/TA): ಕಳೆದ ಕೆಲವು ದಿನಗಳಿಂದ ಕರಾವಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ಆದಿತ್ಯವಾರ ಬೆಳಗ್ಗೆ ನೀರಿನ ಮಟ್ಟ 7.1 ಮೀ ಆಗಿದ್ದು, ಘಟ್ಟ ಪ್ರದೇಶಗಳಲ್ಲಿ ಕೂಡ ಅತಿಯಾದ ಮಳೆಯಾಗುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ ಮತ್ತೆ ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ನೀರು ಏರಿಕೆಯಾಗಿ 8 ಮೀ ತಲುಪಿದರೆ ಬಂಟ್ವಾಳದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಸಾಧ್ಯತೆ ಕೂಡ ಇದೆ.