ಮಂಗಳೂರು,ಆ. 20 (DaijiworldNews/AK): ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ದೀಪ ಬೆಳಗಿಸಿ ಉದ್ಘಾಟಿಸಿದರು.



ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ನಗರ ಅಧ್ಯಕ್ಷೆಯಾಗಿ ಮಾಜಿ ಕಾರ್ಪೊರೇಟರ್ ಕುಮಾರಿ ಅಪ್ಪಿ ಹಾಗೂ ಗ್ರಾಮಾಂತರ ಅಧ್ಯಕ್ಷೆಯಾಗಿ ಉಷಾ ಅಂಚನ್ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಲಾಯಿತು. ರಾಜ್ಯ ಮಹಿಳಾ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಡಿ ರಾವ್ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಝೀನತ್ ಅವರನ್ನು ನೇಮಕ ಮಾಡಲಾಗಿದೆ
ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ.ರೈ, ಮಾಜಿ ಮೇಯರ ಶಶಿಧರ ಹೆಗ್ಡೆ,ಪದ್ಮರಾಜ್ ಪೂಜಾರಿ,ಸದಾಶಿವ ಉಳ್ಳಾಲ್ ಮಮತಾ ಗಟ್ಟಿ, ಶಾಲೆಟ್ ಪಿಂಟೊ,ಮಂಜುಳ ನಾಯಕ್, ಶಕುಂತಲಾ ಕಾಮತ್ ,ನಮಿತಾ.ಡಿ.ರಾವ್ ಹಾಗು ಇನ್ನಿತರರು ಉಪಸ್ಥಿತರಿದ್ದರು