ನೆಲ್ಯಾಡಿ , ಆ. 20 (DaijiworldNews/TA): ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್ ತೂಕದ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್ ರಹಿಮಾನ್ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ ಬಂಧಿಸಿ ಚಿನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಬೈಕ್ನಲ್ಲಿ ಬಂದ ಇಬ್ಬರು ಯುವಕರು ವೃದ್ಧೆಯನ್ನು ಮಾತನಾಡಿಸಿ ಬಳಿಕ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದೊಯ್ದ ಕುರಿತು ದೂರು ನೀಡಲಾಗಿತ್ತು. ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ತಂಡ ಕಾರ್ಯಾಚರಣೆ ನಡೆಸಿದೆ. ದರೋಡೆಗೆ ಬಳಸಿದ ಬೈಕ್ ಮತ್ತು ಅಂದಾಜು 4.54 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಬೈಕ್ ಕೂಡ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಕದಿಯಲ್ಪಟ್ಟದ್ದು ಎಂದು ತಿಳಿದುಬಂದಿದೆ.