ಬಂಟ್ವಾಳ, ಆ. 20 (DaijiworldNews/AA): ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ಬಸ್ಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ವಿದ್ಯಾರ್ಥಿಗಳು ಅಪಾಯದಿಂದ ಪಾರಾದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಶಾಲಾ ಬಸ್ ಪುಣಚದಿಂದ ಪುತ್ತೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಶಾಲಾ ಬಸ್ಗೆ ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಖಾಸಗಿ ಬಸ್ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್, ಅಪಘಾತ ಸಂಭವಿಸಿದ ಸಮಯದಲ್ಲಿ ಶಾಲಾ ಬಸ್ನ ಹಿಂಭಾಗದಲ್ಲಿ ಯಾವುದೇ ವಿದ್ಯಾರ್ಥಿಗಳು ಕುಳಿತಿರದ ಕಾರಣ, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.