ಸುಳ್ಯ, ಆ. 25 (DaijiworldNews/AA): ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ಸಂಭವಿಸಿದೆ.

ವರದಿಗಳ ಪ್ರಕಾರ, ಮಿಂಚಪದವು ಕಡೆಯಿಂದ ಸುಳ್ಯ ಕಡೆಗೆ ಲಾರಿಗಳು ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದವು ಆರೋಪಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಸುಳ್ಯ ಪೊಲೀಸರು ವಾಹನಗಳನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಲಾರಿಗಳನ್ನು ಸುಳ್ಯ ಪೊಲೀಸ್ ಠಾಣೆಗೆ ತರಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.