ಉಡುಪಿ,, ಸೆ. 03 (DaijiworldNews/AK): ಉಡುಪಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವಂತೆಯೇ, ಸೆಪ್ಟೆಂಬರ್ 2 ರ ತಡರಾತ್ರಿ ಅಲೆವೂರಿನಲ್ಲಿ ಮೂವರು ಮುಸುಕುಧಾರಿಗಳ ಗುಂಪು ಮನೆಗಳಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.


ಅಲೆವೂರಿನ ಕುಕ್ಕಿಕಟ್ಟೆ ಪ್ರದೇಶದಲ್ಲಿ ಮೂವರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಮೂಲಗಳ ಪ್ರಕಾರ, ಅಲೆವೂರಿನ ಕಲ್ಯಾಣ್ ನಗರದಲ್ಲಿರುವ ಫ್ಲಾಟ್ಗೆ ದುಷ್ಕರ್ಮಿಗಳು ನುಗ್ಗಿದ್ದಾರೆ. ಸುತ್ತಮುತ್ತಲಿನ ಇತರ ಸ್ಥಳಗಳಲ್ಲಿಯೂ ಅವರು ಕಳ್ಳತನದಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಮಣಿಪಾಲ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ವಲಸೆ ಕಾರ್ಮಿಕರಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಅವರ ಮೇಲೆ ನಿಗಾ ಇಡಲಾಗುತ್ತಿದೆ. ಮಾಹಿತಿ ತಿಳಿದು ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.