ಬೆಳ್ತಂಗಡಿ, ಸೆ. 05 (DaijiworldNews/AA): ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್ನನ್ನು ಎಸ್ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್ಗೂ ಎಸ್ಐಟಿ ನೋಟಿಸ್ ನೀಡಿದೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಎಸ್ಐಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಹಲವು ವೀಡಿಯೊಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಮುನಾಫ್ ಹರಿಬಿಟ್ಟಿದ್ದ. ತನ್ನ ಯೂಟ್ಯೂಬ್ ನಲ್ಲಿ ಬುರುಡೆ ತೆಗೆಯುವ ವಿಡಿಯೋ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಮನಾಫ್ಗೆ ನೋಟಿಸ್ ನೀಡಲಾಗಿದೆ ತಿಳಿದು ಬಂದಿದೆ.