ಪುತ್ತೂರು, ಸೆ. 05 (DaijiworldNews/AK): ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆಯ 21 ವರ್ಷದ ಶ್ರೀಕೃಷ್ಣ ಜೆ ರಾವ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಪೂರ್ಣಗೊಂಡ ನಂತರ ಗುರುವಾರ ಶ್ರೀಕೃಷ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪೊಲೀಸರ ಪ್ರಕಾರ, ಬಿಜೆಪಿ ನಾಯಕ ಜಗನ್ನಿವಾಸ ರಾವ್ ಅವರ ಮಗನಾಗಿರುವ ಆರೋಪಿ, 21 ವರ್ಷದ ಮಹಿಳೆಗೆ ಮದುವೆ ಭರವಸೆ ನೀಡಿದ ನಂತರ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದ. ಆಕೆ ಗರ್ಭಿಣಿಯಾದಾಗ, ಆಕೆಯನ್ನು ಮದುವೆಯಾಗಲು ಅವನು ನಿರಾಕರಿಸಿದನೆಂದು ಆರೋಪಿಸಲಾಗಿದೆ.
ಇದರ ನಂತರ, ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಅವನ ವಿರುದ್ಧ ಅತ್ಯಾಚಾರ ಮತ್ತು ವಿಶ್ವಾಸ ದ್ರೋಹದ ಪ್ರಕರಣ ದಾಖಲಾಗಿತ್ತು.