ಮಂಜೇಶ್ವರ , ಡಿ 9: ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರು ಕೇರಳ ಸಂದರ್ಶನ ನಡೆಸಿ 125 ವರ್ಷಗಳು ಪೂರ್ಣಗೊಂಡಿದೆ.
ಈ ಹಿನ್ನೆಲೆಯಲ್ಲಿ ಮಂಜೇಶ್ವರ ಹೊಸಂಗಡಿಯಲ್ಲಿ ಜಿಲ್ಲಾ ಮಟ್ಟದ ವಿಶೇಷ ಕಾರ್ಯಕ್ರಮ ನಡೆದಿದೆ. ಕೇರಳ ಸರಕಾರದ 14 ಜಿಲ್ಲೆಗಳಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನೊಂದಿಗೆ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ವಿವೇಕಾನಂದರನನ್ನು ಅತ್ಯಂತ ಗೌರವದಿಂದ ಸ್ಮರಿಸಲಾಯಿತು.
ನಾಟಕ, ಸಿನಿಮಾ, ನೃತ್ಯ ಸೇರಿದಂತೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಸುಮಾರು 60 ಕ್ಕೂಮಿಕ್ಕಿ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲಾಧಿಕಾರಿ ಜೀವನ್ ಬಾಬು ಉದ್ಘಾಟಿಸಿದ್ದು, ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ.ಕೆ.ಎಂ ಅಶ್ರಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.