ಉಡುಪಿ, ಸೆ. 05 (DaijiworldNews/AA): ಸ್ಥಳೀಯ ಸಂಸ್ಥೆಗಳ ಸ್ಥಾಯಿ ಸಮಿತಿಗಳನ್ನು ಮರುಸಂಘಟಿಸುವ ಮೂಲಕ ಆಡಳಿತವನ್ನು ಸರಳಗೊಳಿಸುವ ರಾಜ್ಯ ಸರ್ಕಾರದ ನಿರ್ದೇಶನದಂತೆ, ಉಡುಪಿ ನಗರಸಭೆಯು ಮೂರು ಹೊಸ ಸ್ಥಾಯಿ ಸಮಿತಿಗಳನ್ನು ರಚಿಸಿ, ಅವುಗಳ ಅಧ್ಯಕ್ಷರನ್ನು ಆಯ್ಕೆ ಮಾಡಿದೆ.

ಅದರಂತೆ, ತೆರಿಗೆ, ಹಣಕಾಸು ಮತ್ತು ಮೇಲ್ಮನವಿಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಮಣಿಪಾಲ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ವಿಜಯ ಕೊಡವೂರು ಅವರನ್ನು ನಗರ ಯೋಜನೆ ಮತ್ತು ನಗರಾಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಮತ್ತು ಟಿ.ಜಿ.ಹೆಗ್ಡೆ ಅವರನ್ನು ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಈ ಚುನಾವಣೆಗಳು ಬುಧವಾರ ನಗರಸಭೆಯಲ್ಲಿ ನಡೆದವು.
ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ವಹಿಸಿದ್ದರು. ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಜೆ.ಕಲ್ಮಾಡಿ, ಪೌರಾಯುಕ್ತ ಮಹಾಂತೇಶ್, ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.