ಕಾಸರಗೋಡು, ಸೆ. 06 (DaijiworldNews/AA): ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ.

ಮದಂಗಲ್ಲಿನ ಸುಬ್ರಾಯ ಭಟ್ (86) ಮೃತಪಟ್ಟವರು.
ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥತೆಯಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಸುಬ್ರಾಯ ಭಟ್ ಹಾಗೂ ಪತ್ನಿ ರಾಜಮ್ಮ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.