ನವದೆಹಲಿ, ಡಿ 9 : ಆದಾಯ ತೆರಿಗೆ ಖಾತೆ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಗಡುವನ್ನು 2018ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ತೆರಿಗೆದಾರರಲ್ಲಿ ಅನೇಕ ಜನರು ಪ್ಯಾನ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಲ್ಲ. ಹಾಗಾಗಿ ಈ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. 33 ಕೋಟಿ ಪ್ಯಾನ್ಗಳ ಪೈಕಿ ನವೆಂಬರ್ವರೆಗೆ 13.28 ಕೋಟಿ ಪ್ಯಾನ್ಗಳಿಗೆ ಮಾತ್ರ ಆಧಾರ್ ಜೋಡಣೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಪ್ಯಾನ್ಗೆ ಆಧಾರ್ ಜೋಡಣೆ ಮಾಡುವ ಗಡುವನ್ನು ಮೂರು ಬಾರಿ ವಿಸ್ತರಣೆ ಮಾಡಲಾಗಿತ್ತು. ಮೊದಲಿಗೆ, ಜುಲೈ 31ಕ್ಕೆ ನಿಗದಿ ಮಾಡಲಾಗಿದ್ದ ಗಡುವನ್ನು ಆಗಸ್ಟ್ 31ಕ್ಕೆ ವಿಸ್ತರಿಸಲಾಗಿತ್ತು. ಬಳಿಕ ಡಿಸೆಂಬರ್ 31 ಕೊನೆಯ ದಿನ ಎಂದು ಹೇಳಲಾಗಿತ್ತು. ಆದರೆ ಇದೀಗ 2018ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.