ಮಂಗಳೂರು, ಸೆ. 13 (DaijiworldNews/AK): ಮಂಗಳೂರು ಮಹಾನಗರ ಪಾಲಿಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದಲ್ಲಿ ಹಾಗೂ ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಇರುವ ಕಾರಣ ಸೆ.16ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ.

ಇದರಿಂದ ಸೆ.16ರಂದು ನಗರದಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.