ಮಂಗಳೂರು, ಜು 02 (Daijiworld News/MSP): ಚುನಾವಣೆ ಆಯೋಗದ ನಿರ್ದೇಶನದಂತೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಆಯುಕ್ತರಾಗಿ ವರ್ಗಾವಣೆ ಹೊಂದಿದ್ದ ಮೊಹಮ್ಮದ್ ನಜೀರ್ ಅವರು ಜು.01 ರ ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಪಾಲಿಕೆ ಪ್ರಭಾರ ಆಯುಕ್ತ ನಾರಾಯಣಪ್ಪ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಆಯುಕ್ತ ಶ್ರೀಕಾಂತ್ ರಾವ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಅವರನ್ನು ಸರ್ಕಾರ ಮತ್ತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿದೆ.