ಬೆಂಗಳೂರು ಡಿ 10: ’ಹಾಯ್ ಬೆಂಗಳೂರು' ಪತ್ರಿಕೆ ಸಂಸ್ಥಾಪಕ ಸಂಪಾದಕ ಅವರ ಮೇಲೆ ಡಿ. 10ರ ಭಾನುವಾರ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಸಿಸಿಬಿ ಪೊಲೀಸರು ರವಿ ಬೆಳಗೆರೆಗೆ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿರುವಾಗ 50 ವರ್ಷ ಗಳ ಹಿಂದಿನ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪು ಪತ್ತೆಯಾಗಿತ್ತು, ಇದನ್ನು ಸಿಸಿಬಿ ಪೊಲೀಸರು ಅರಣ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದು ಬಳಿಕ , ಈ ಪ್ರಕರಣ ಹಸ್ತಾಂತರಿಸಿ ಜಿಂಕೆಯ ಚರ್ಮ ಹಾಗೂ ಆಮೆ ಚಿಪ್ಪುಗಳ ಬಗ್ಗೆ ಪರಿಶೀಲಿಸುವಂತೆ ಹೇಳಿದ್ದರು. ಅರಣ್ಯಾಧಿಕಾರಿಗಳ ಪರಿಶೀಲನೆ ನಡೆಸಿ ಇದೀಗ ಎಫ್ಐಆರ್ ದಾಖಲಿಸಿದ್ದಾರೆ.
ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ರವಿಬೆಳಗರೆಯನ್ನು ಇಂದು ಕೂಡಾ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.