ಮಂಗಳೂರು ಡಿ 10: ಬಂಟ್ವಾಳದ ಫರಂಗಿಪೇಟೆಯಿಂದ ಮಾಣಿಯವರೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ಡಿಸೆಂಬರ್ 12 ರಂದು ನಡೆಯಲಿರುವ ಸಾಮರಸ್ಯ ನಡಿಗೆಗೆ ಮುಸ್ಲಿಂ ಒಕ್ಕೂಟ ಬೆಂಬಲವಿಲ್ಲ ಎಂದು ಸಂಘಟನೆಯ ಅಧ್ಯಕ್ಷ ಕೆ.ಅಶ್ರಫ್ ತಿಳಿಸಿದ್ದಾರೆ. ಈ ಬಗ್ಗೆ ದೈಜಿವಲ್ಡ್ ಜತೆ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ನಡಿತಾ ಇದೆ ಆದರೆ ರಾಜ್ಯ ಸರ್ಕಾರ ಅದರಲ್ಲೂ ಜಿಲ್ಲೆಯ ಇಬ್ಬರು ಮಂತ್ರಿಗಳು ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸ್ತಾ ಇಲ್ಲ, ನ್ಯಾಯ ದೊರಕಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಸಾಮರಸ್ಯ ನಡಿಗೆಯಲ್ಲಿ ಭಾಗವಹಿಸದೇ ಇರಲು ಮುಸ್ಲಿಂ ಒಕ್ಕೂಟ ನಿರ್ಧರಿಸಿದೆ ಎಂದು ತಿಳಿಸಿದರು.