ಕಾಸರಗೋಡು, ಜು 04 (Daijiworld News/SM): ಯುವಕನೋರ್ವನ ಕೊಲೆ ಪ್ರಕರಣದ ಆರೋಪಿಯೋರ್ವನ ಕೃತ್ಯ ಸಾಬೀತಾಗಿದ್ದು ಆರೋಪಿಗೆ ಕಾಸರಗೋಡು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವರ್ಷ ಕಠಿಣ ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಚಟ್ಟಂಚಾಲ್ ಮಹಿನಾಬಾದ್ ನ ಎಂ.ಕೆ. ನವಾಜ್(39) ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ೨೦೧೩ ರ ಮೇ ಒಂದರಂದು ಚಟ್ಟಂಚಾಲ್ ಪುತ್ತರಿಯಡ್ಕದ ಕೃಷ್ಣ(31) ಎಂಬವರನ್ನು ಆರೋಪಿ ಕತ್ತು ಹಿಸುಕಿ ಕೊಲೆ ನಡೆಸಿದ್ದ. ಹಣಕಾಸಿನ ಕುರಿತು ಉಂಟಾದ ವಿವಾದವೇ ಕೊಲೆಗೆ ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ ಶಿಕ್ಷೆ ವಿಧಿಸಿದೆ.