ಮಂಗಳೂರು, ಜು08(Daijiworld News/SS): ನಗರದ ಹೊರವಲಯದ ಸುರತ್ಕಲ್ ಸಮೀಪ ಲಾಡ್ಜ್'ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ನಗರದ ಹೊರವಲಯದ ಸುರತ್ಕಲ್ ಸಮೀಪದ ಖಾಸಗಿ ಲಾಡ್ಜ್ ಮೇಲೆ ಈ ದಾಳಿ ನಡೆದಿದ್ದು, ಲಾಡ್ಜ್'ನ 2 ಕೋಣೆಗಳಲ್ಲಿ 7 ಜನರು ಮಾದಕ ದ್ರವ್ಯಗಳೊಂದಿಗೆ ಪತ್ತೆಯಾಗಿದ್ದಾರೆ. ಈ 7 ಆರೋಪಿಗಳ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಮಾತ್ರವಲ್ಲ, ಆರೋಪಿಗಳಿಂದ 500 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ, ಹೋಟೆಲ್ನ ಪರವಾನಗಿಯನ್ನು ಅಮಾನತುಗೊಳಿಸುವಂತೆ ಸ್ಥಳೀಯ ಸಂಸ್ಥೆಗೆ ಪತ್ರ ಬರೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.