ಕಾಸರಗೋಡು, ಜು 08 (DaijiworldNews/SM): ಎಂಡೋಸಲ್ಫಾನ್ ಸಂತ್ರಸ್ತರ ಬಗ್ಗೆ ಜಿಲ್ಲಾಧಿಕಾರಿ ನೀಡಿರುವ ಹೇಳಿಕೆ ವಿರುದ್ಧ ಆಕ್ರೋಶಗೊಂಡಿರುವ ಎಂಡೋಸಲ್ಫಾನ್ ಸಂತ್ರಸ್ಥ ಜನಪರ ಒಕ್ಕೂಟ ಎಂಡೋಸಲ್ಫಾನ್ ಸಂತ್ರಸ್ತ ಸೆಲ್ ಸಮಿತಿಯಿಂದ ಜಿಲ್ಲಾಧಿಕಾರಿಗಳನ್ನು ಕೈಬಿಡಬೇಕೆಂದು ಆಗ್ರಹಿಸಿದೆ.
ಅಲ್ಲದೆ, ಎಂಡೋಸಲ್ಫಾನ್ ಸಂತ್ರಸ್ಥ ಜನಪರ ಒಕ್ಕೂಟ ವತಿಯಿಂದ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಇತ್ತೀಚಿಗೆ ಜಿಲ್ಲಾಧಿಕಾರಿಗಳು ನೀಡಿರುವ ಹೇಳಿಕೆ ಸರಿಯಲ್ಲ. ಸಂತ್ರಸ್ತರ ಬಗ್ಗೆ ಜಿಲ್ಲಾಧಿಕಾರಿಗಳ ನಿಲುವು ಸರಿಯಲ್ಲ ಎಂದು ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.
ಎಂಡೋ ಸಂತ್ರಸ್ಥ ರೋಗಿಗಳಿಗೆ ಸರಕಾರ ನೀಡಿರುವ ಭರವಸೆಯನ್ನು ಪಾಲಿಸಬೇಕು. ಜಿಲ್ಲಾಧಿಕಾರಿಯವರು ಎಂಡೋ ಕಂಪೆನಿ ಪರ ಮಾತನಾಡುತ್ತಿದ್ದಾರೆ. ಇದರಿಂದ ಜಿಲ್ಲಾಧಿಕಾರಿಯವರ ಹೇಳಿಕೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.