ಮಂಗಳೂರು, ಜು 09 (DaijiworldNews/SM): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಶಿಕ್ಷಕರು ಇಂದು ಪ್ರತಿಭಟನೆ ನಡೆಸಿದರು. ಮಂಗಳೂರಿನ ಕೇಂದ್ರ ಮೈದಾನದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭಡ್ತಿ, ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವುದು, ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ನಮ್ಮ ಬೇಡಿಕೆಗಳಿಗೆ ಸ್ಪಂದನೆ ನೀಡದಿದ್ದರೆ, ಶಿಕ್ಷಕರ ದಿನಾಚರಣೆಯನ್ನ ಬಹಿಷ್ಕರಿಸಿ, ವಿಧಾನ ಸೌಧ ಚಲೋ ನಡೆಸಲಾಗುವುದು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಶಿವಶಂಕರ ಭಟ್ ಎಚ್ಚರಿಕೆ ನೀಡಿದರು.
ಈ ವೇಳೆ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ನಿವೃತ್ತ ಶಿಕ್ಷಕ ರಮೇಶ್ ನಾಯಕ್ ರಾಯ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.