ಮಂಗಳೂರು, ಜು 10 (Daijiworld News/MSP): ಭಾರಿ ಮಳೆಯಿಂದಾಗಿ ಪಶ್ಚಿಮ ಘಟ್ಟದ ಸಕಲೇಶಪುರ- ಸುಬ್ರಹ್ಮಣ್ಯ ವಲಯದಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿದ್ದ ಹಾಸನ-ಮಂಗಳೂರು ಮಾರ್ಗದ ರೈಲು ಸೇವೆ ಬುಧವಾರ ಪುನಾರಂಭಗೊಂಡಿದೆ.
ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಮಂಗಳವಾರ ಅಪರಾಹ್ನ ಹೊರಟ್ಟಿದ್ದ ಮಂಗಳೂರು-ಬೆಂಗಳೂರು ರೈಲು ನೆಟ್ಟಣ ರೈಲ್ವೇ ನಿಲ್ದಾಣದಲ್ಲಿ ಸ್ಥಗಿತವಾಗಿತ್ತು. ಈ ಹಿನ್ನಲೆಯಲ್ಲಿ ರೈಲ್ವೇ ನಿಲ್ದಾಣದಲ್ಲಿ ವ್ಯವಸ್ಥೆಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಯಿತು.
ಬುಧವಾರ ಬೆಳಗ್ಗೆ ಹಳಿಗಳ ಮೇಲೆ ಬಿದ್ದಿದ್ದ ಕಲ್ಲು ಮಣ್ಣುಗಳನ್ನು ತೆರವುಗೊಳಿಸಿ ಎಂದಿನಂತೆ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಮೈಸೂರು ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ಅಧಿಕಾರಿ ಸತೀಶ್ ತಿಳಿಸಿದ್ದಾರೆ.