ಸುಳ್ಯ, ಡಿ. 18 (DaijiworldNews/AA): ವಂಚನೆ ಪ್ರಕರಣದಲ್ಲಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ.
ಸುಳ್ಯ ಪೊಲೀಸ್ ಠಾಣಾ ಅ.ಕ್ರ 47/2022, ಕಲಂ: 406, 420 ಐಪಿಡಿ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಸುಳ್ಯ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ರಮೇಶ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಶ್ರೀಶೈಲ ಅವರುಗಳು ಡಿ. 18ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.