ಉಡುಪಿ, ಡಿ. 19 (DaijiworldNews/TA): ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿಯಾಗಿದ್ದು, ಉಡುಪಿ ಜಿಲ್ಲಾ ಲೋಕಾಯುಕ್ತರು ಪರಿಶೀಲನೆ ನಡೆಸಿದ್ದಾರೆ.


ಸಾರ್ವಜನಿಕ ಹಿತಾಸಕ್ತಿಯ ಫೈಲ್ ಗಳು ವಿಲೇವಾರಿ ಆಗದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.ಡಿ.೧೮ರ ಬೆಳಗಿನಿಂದಲೇ ದಾಖಲೆ ಪರಿಶೀಲಿಸಿದ ಲೋಕಾಯುಕ್ತ ಪೊಲೀಸರ ತಂಡವು, ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಇರುವ ಬಗ್ಗೆ ತನಿಖೆ ನಡೆಸಿದ್ದಾರೆ.
ಈ ಬಗ್ಗೆ ಕಾಪು ಜನಸಂಪರ್ಕ ಸಭೆಯಲ್ಲೂ ಆರೋಪ ಕೇಳಿ ಬಂದಿತ್ತು. ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಹಾಲಮೂರ್ತಿ ರಾವ್, ಡಿವೈಎಸ್ಪಿ, ಮಂಜುನಾಥ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಯಿತು.