ಕಾರ್ಕಳ, ಜು11(Daijiworld News/SS): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ವರದಿಯಾಗಿದೆ.
ಕಾರ್ಕಳದಿಂದ ಬೆಳ್ಮಣ್ ಕಡೆಯತ್ತ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಸುಮಾರು 15 ಅಡಿ ಆಳಕ್ಕೆ ಉರುಳಿ ಬಿದ್ದಿದೆ. ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿಯ ನಂದಳಿಕೆ ತಿರುವು ಬಳಿ ಈ ಘಟನೆ ನಡೆದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.