ವಿಟ್ಲ, ಜು11(Daijiworld News/SS): ಶೌಚಾಲಯದ ಗುಂಡಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ವಿಟ್ಲ ಸಮೀಪದ ನೆಟ್ಲಮುಡ್ನೂರು ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಮೃತರನ್ನು ಕೆದಿಲ ಗ್ರಾಮದ ಕಲ್ಲರ್ಪೆ ನಿವಾಸಿ ರಾಜೇಶ್ (30) ಎಂದು ಗುರುತಿಸಲಾಗಿದೆ.
ರಾಜೇಶ್ ಅವರು ಜೆಸಿಬಿ ಆಪರೇಟರ್ ಆಗಿದ್ದು, ನೆಟ್ಲ ಮುಡ್ನೂರು ಗ್ರಾಮದ ಪೆರ್ಲೊಟ್ಟು ಎಂಬಲ್ಲಿನ ಸೈಟ್'ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಪ್ರದೇಶದಲ್ಲಿದ್ದ ಜಾಗವೊಂದನ್ನು ಜೆಸಿಬಿ ಮೂಲಕ ಸಮತಟ್ಟು ಮಾಡಿದ್ದು, ಇದೇ ಸ್ಥಳದಲ್ಲಿದ್ದ ಶೌಚಾಲಯದ ಗುಂಡಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.