ಉಡುಪಿ, ಡಿ. 30 (DaijiworldNews/AA): ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಕಣ್ಣಂಗಾರ್ ಗರೋಡಿ ಎಂಬಲ್ಲಿ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದೆ.



ಈ ಗೂಡ್ಸ್ ವಾಹನವು ಪಡುಬಿದ್ರಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿ ಉಂಟಾದ ತಾಂತ್ರಿಕ ದೋಷದ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯಲ್ಲಿದ್ದ ಮಂಜತೋಟ ಇಸ್ಮಾಯಿಲ್ ಎಂಬುವವರಿಗೆ ಸೇರಿದ ಮನೆಗೆ ವಾಹನ ಡಿಕ್ಕಿ ಹೊಡೆದಿದೆ.
ಅಪಘಾತದ ಸಮಯದಲ್ಲಿ ಮನೆಯ ನಿವಾಸಿಗಳು ಮನೆಯ ಒಂದು ಮೂಲೆಯಲ್ಲಿ ಕುಳಿತಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಮತ್ತು ಎಲ್ಲರೂ ಸುರಕ್ಷಿತವಾಗಿದ್ದಾರೆ. ಆದರೆ, ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಒಂದು ಭಾಗವು ಭಾಗಶಃ ಜಖಂಗೊಂಡಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.